ಚಾಮರಾಜನಗರ: ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹದೇಶ್ವರ ಬೆಟ್ಟದ ರಸ್ತೆಯ ಪೊನ್ನಾಚಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಮಲೆ ಮಹದೇಶ್ವರನ ದರ್ಶನ ಪಡೆದು ಹಿಂದಿರುಗುವಾಗ ಘಟನೆ ನಡೆದಿದೆ. ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ ಗಾಯಾಳುಗಳು ನರಳಾಡಿದ್ದಾರೆ. ವೀಕೆಂಡ್ ರಜೆ ಹಿನ್ನಲೆ ವಾಹನ ಸಂಚಾರ ಹೆಚ್ಚಾಗಿದ್ದು, ಬಸ್ ಪಲ್ಟಿಯಿಂದ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.

