ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸಾಕುಪ್ರಾಣಿಗಳ ಭಕ್ಷಕ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚನೆ ಮಾಡಿ ಡ್ರೊಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಸದ್ಯಕ್ಕೆ ಚಿರತೆ ಪತ್ತೆಯಾಗದ ಕಾರಣದಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ರ ವ್ಯಾಪ್ತಿಗೆ ಬರುವ ಬಫರ್ ಜೋನ್ ವಲಯದ ಗಂಗನ ದೊಡ್ಡಿ, ಬಸಪ್ಪನ ದೊಡ್ಡಿ, ಉಡುತೊರೆ ಜಲಾಶಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕುಪ್ರಾಣಿಗಳ ಭಕ್ಷಕ ಚಿರತೆಯನ್ನು ಸರಿ ಹಿಡಿಯಲು ರೈತ ಸಂಘಟನೆಯ ಒತ್ತಾಯದ ಮೇರೆಗೆ ಹಗಲು ರಾತ್ರಿ ಎನ್ನದೆ ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚಿಸಿ ಚಿರತೆಯನ್ನು ಸೆರೆಹಿಡಿಯಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.
ಹನೂರು ತಾಲ್ಲೂಕಿನ ಗಂಗನ ದೊಡ್ಡಿ ಹಾಗೂ ಬಸಪ್ಪನ ದೊಡ್ಡಿ ಮತ್ತು ಉಡುತೊರೆ ಜಲಾಶಯ ಸುತ್ತ ಮುತ್ತಲಿನ ಹಳ್ಳದ ಸಮೀಪದಲ್ಲಿಯೇ ರೈತರ ಕಬ್ಬಿನ ತೋಟಗಳ ಬಳಿಯೇ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ರೈತರ ಜಮೀನುಗಳಲ್ಲಿ ಸಾಕುಪ್ರಾಣಿಗಳಾದ ನಾಯಿ, ಮೇಕೆ, ಕುರಿ ಗುರಿಯಾಗಿಸಿಕೊಂಡು ಚಿರತೆ ಕೊಂದು ತಿನ್ನುತ್ತಿರುವುದು ರೈತರ ನಿದ್ದೆಗೆಡಿಸಿದೆ. ಹೀಗಾಗಿ ಚಿರತೆ ಸೆರೆಗೆ ಕಾರ್ಯಪಡೆಯಿಂದ ಗ್ರಾಮಸ್ಥರಿಗೆ ರಾತ್ರಿ ವೇಳೆ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳದಲ್ಲಿ ಕಟ್ಟಿ ಹಾಕಬೇಕು. ಜೊತೆಗೆ ಒಬ್ಬೊಬ್ಬರೇ ಓಡಾಡುವುದನ್ನು ಬಿಟ್ಟು ಸಣ್ಣ ಮಕ್ಕಳು, ಹಿರಿಯ ನಾಗರಿಕರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.
ಕಳೆದ ಹಲವಾರು ತಿಂಗಳುಗಳಿಂದ ಗಂಗನ ದೊಡ್ಡಿ ಮತ್ತೆ ಸುತ್ತಮುತ್ತಲಿನ ಐದಾರು ಕಿ.ಮೀ ವ್ಯಾಪ್ತಿಯಲ್ಲಿ ಚಿರತೆ ಸಾಕುಪ್ರಾಣಿಗಳನ್ನು ಕೊಂದು ತಿನ್ನುವುದರ ಜೊತೆಗೆ ಗ್ರಾಮಸ್ಥರಿಗೂ ಪದೇ ಪದೇ ಕಾಣಿಸಿಕೊಂ ಭಯಭೀತರಾ ಗಿದ್ದು, ಆತಂಕ ದೂರ ಮಾಡಲು ಚಿರತೆ ಸೆರೆಗೆ ಹಗಲು ರಾತ್ರಿ ಎನ್ನದೆ ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಬಫರ್‌ಜೋನ್ ವಲಯ ಅರಣ್ಯಾಧಿಕಾರಿ ಪ್ರವೀಣ್ ಮಾತನಾಡಿ ಈಗಾಗಲೇ ಹನೂರು ತಾಲ್ಲೂಕಿನ ಗಂಗನ ದೊಡ್ಡಿ ಗ್ರಾಮದಲ್ಲಿ ಬೋನ್ ಇಡಲಾಗಿದೆ. ಚಿರತೆ ಬೋನಿಗೆ ಬೀಳುತ್ತಿಲ್ಲ. ಹೀಗಾಗಿ ಚಿರತೆ ಪತ್ತೆಗೆ ಫೈಬರ್‌ಗೇಜ್ ಹಾಗೂ ತುಮಕೂರು ಗೇಜ್ ಪಂಜರವನ್ನು ಅಳವಡಿಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಇಲಾಖೆ ಸಿಬ್ಬಂದಿ ರಾತ್ರಿ ಹಗಲು ತಂಡ ರಚನೆ ಮಾಡಿಕೊಂಡು ಗ್ರಾಮಗಳಲ್ಲಿ ಕಾವಲು ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

