ಗುಂಡ್ಲುಪೇಟೆ : ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಗುಂಡ್ಲುಪೇಟೆ ತಹಸೀಲ್ದಾರ್ ಕಚೇರಿ ಮುಂಭಾಗ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಚಳುವಳಿಗಿಳಿದಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪಧಾಧಿಕಾರಿಗಳು ನಡೆಸುತ್ತಿರುವ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ, ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಪ್ರತಿಭಟನಾ ಸ್ಥಳಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಬಂಡೀಪುರ ಸಿಎಫ್ ಪ್ರಭಾಕರನ್ ಅವರು ಖುದ್ದಾಗಿ ಆಗಮಿಸಿ ರೈತರ ಅಹವಾಲುಗಳನ್ನ ಆಲಿಸಬೇಕು ಎಂದು ಒತ್ತಾಯ ಹೇರಿದ್ದರೂ ಸಹ ಕಚೇರಿ ಕೆಲಸದ ನೆಪವೊಡ್ಡಿ,
ಪ್ರತಿಭಟನಾನಿರತ ರೈತರ ಸಮಸ್ಯೆ ಕೇಳದೆ ನಿರ್ಲಕ್ಷ್ಯವಹಿಸಿದ್ದಾರೆ, ರೈತಪರವಾಗಿ ಕೆಲಸ ಮಾಡಬೇಕಿದ್ದ ಅಧಿಕಾರಿಗಳು ಉಡಾಫೆ ತೋರುತ್ತಿದ್ದಾರೆ, ಹಾಗಂತ ಧರಣಿಯಿಂದ ಹಿಂದೆ ಸರಿಯುವ ಜಾಯಮಾನ ರೈತರಿಗಿಲ್ಲ , ಅಧಿಕಾರಿಗಳ ವಿರುದ್ದ ಚಳುವಳಿ ಬೇರೆ ಸ್ವರೂಪ ಪಡೆದುಕೊಳ್ಳುವ ಮುಂಚೆ ಎಚ್ಚೆತ್ತುಕೊಳ್ಳಿ ಇಲ್ಲವಾದಲ್ಲಿ ಪ್ರತಿಭಟನೆ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.

