ಗುಂಡ್ಲುಪೇಟೆ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಮಹಿಳೆಯರು ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಸಮೀಪ ಬುಧವಾರ ಬೆಳಗ್ಗೆ ನಡೆದಿದೆ.

ಟೈರ್ ಸ್ಫೋಟಗೊಂಡು ಗೂಡ್ಸ್ ಆಟೋ ಪಲ್ಟಿಯಾಗಿದ್ದು ಯಾನಗಳ್ಳಿಯಿಂದ 15 ಮಂದಿಯನ್ನು ಬೊಮ್ಮಲಾಪುರಕ್ಕೆ ಕರೆದೊಯ್ಯುವಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

