ಚಾಮರಾಜನಗರ: ಮನೆಯ ಬಾಗಿಲು ಮೀಟಿ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.

ಮಂಜುಳಾ ಎಂಬುವರು ಬಾಡಿಗೆಗಿದ್ದ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ. ಇಂದು ಮನೆಗೆ ವಾಪಸ್ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಶಿಧರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


