ಚಾಮರಾಜನಗರ: ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೇ ಬೇಟೆಗಾರರು ಆಕ್ಟೀವ್ ಆಗಿದ್ದು, ಮಣ್ಣಿನಲ್ಲಿ ಹುದುಗಿಸಿಟ್ಟಿದ್ದ ಹುಲಿಯ ಅರ್ಧ ಕಳೇಬರ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಪತ್ತೆಯಾಗಿದೆ.

ಹುಲಿಯ ತಲೆ, ಭುಜ, ಮುಂಗಾಲುಗಳು ಮಾತ್ರ ಪತ್ತೆ- ಉಳಿದ ಭಾಗಗಳು ನಾಪತ್ತೆಯಾಗಿದೆ. ಕಳ್ಳಬೇಟೆ ಪ್ರಕರಣವೆಂದು ಮಲೆಮಹದೇಶ್ವರ ವನ್ಯಜೀವಿಧಾಮದಿಂದ ತನಿಖೆಯಿಂದ ತಿಳಿದು ಬಂದಿದೆ.

ಮಲೆಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಪಿಸಿಸಿಎಫ್ ಸ್ಮಿತಾ ಬಿಜ್ಜುರು ನೇತೃತ್ವದಲ್ಲಿ ತನಿಖೆಗೆ ಆದೇಶ ಹೊರಡಿಸಲಾಗಿದೆ.