ಗುಂಡ್ಲುಪೇಟೆ: ಕೆ ಎಸ್ ಆರ್ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪಟ್ಟಣದ ಮೈಸೂರು ರಸ್ತೆಯ ವೆಂಕಟೇಶ್ವರ ಕಲಾಮಂದಿರದ ಬಳಿ ಭಾನುವಾರ ಸಂಭವಿಸಿದೆ.
ಗುಂಡ್ಲುಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಹಾಗೂ ತಮಿಳುನಾಡು ಕಡೆಗೆ ಹೋಗುತ್ತಿದ್ದ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಪೆಟ್ಟಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು , ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆಯಲ್ಲಿ ಗಾಯಗೊಂಡ ಕೆ ಎಸ್ ಆರ್ಟಿಸಿ ಬಸ್ ಚಾಲಕ ಹಾಗೂ ಈಚರ್ ಲಾರಿ ಚಾಲಕನಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

