ಚಾಮರಾಜನಗರ: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಳ್ಯದಬಯಲಿನಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಭಾಷಾ ಎಂಬುವವರಿಗೆ ಮನೆಗೆ ನೀರು ನುಗಿದ್ದು, ನೀರು ಹೊರಹಾಕಲು ಕುಟುಂಬಸ್ಥರು ರಾತ್ರಿಯಿಡಿ ಪರದಾಡಿದ್ದಾರೆ. ಜೊತೆಗೆ ಮನೆಯಲ್ಲಿದ್ದ ಧವಸಧಾನ್ಯಗಳಿಗೂ ನೀರು ಸೇರಿ, ಅಪಾರ ಪ್ರಮಾಣ ಹಾನಿಯುಂಟಾಗಿದೆ.

ಚಿಕ್ಕಮಗಳೂರು ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದ್ದು, ನಗರದಾದ್ಯಂತ ನಾನಾ ಅವಾಂತರ ಸೃಷ್ಟಿಯಾಗಿದೆ. ಗಾಳಿ-ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕೋಟೆ ಬಡಾವಣೆಯಲ್ಲಿ ಮನೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿದ್ದು, ಕೋರ್ಟ್ ಮುಂಭಾಗ ಹತ್ತಾರು ವಿದ್ಯುತ್ ಕಂಬಗಳು ಧಾರಾಶಾಹಿಯಾಗಿವೆ.