ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್ ಪಲ್ಟಿ 20 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಹಾಲರವಿ ಹಳ್ಳದ ಬಳಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆ, ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದ ಪ್ರಯಾಣಿಕರು ಆರೋಪಿಸಿದ್ದಾರೆ. ಬಸ್ಸಿನಲ್ಲಿದ್ದ ಸುಮಾರು 50 ಮಂದಿ ಪ್ರಯಾಣಿಕರಲ್ಲಿ 20 ಮಂದಿಗೆ ಗಾಯಗಳಾಗಿದೆ.
ಗಾಯಾಳು ಕೊಳ್ಳೆಗಾಲ ಮತ್ತು ಹನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

