ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಗಳು ಡಿಪೋದಿಂದ ಬಸ್ ನಿಲ್ದಾಣಕ್ಕೆ ಬಂದು ನಿಂತುಕೊಂಡಿತು. ದೂರದೂರಿಗೆ ತೆರಳುವ ಪ್ರಯಾಣಿಕರು ಬಸ್ ಬಂತಲ್ಲ ಎಂದು ಬಸ್ ಹತ್ತಿದ ಪ್ರಯಾಣಿಕರು ಬಸ್ ನಲ್ಲೇ ಕುಳಿತುಕೊಳ್ಳುವ ಪರಿಸ್ಥಿತಿ ಬಂತು.
ಮಂಗಳವಾರ ರಾಜ್ಯಾದಾದ್ಯಂತ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮುಷ್ಕರ ಹೂಡಿದ್ದರಿಂದ ಬಸ್ ರಸ್ತೆಗಿಳಿಯಲಿಲ್ಲ. ಹೈಕೋರ್ಟ್ ಸೂಚನೆಯನ್ನು ಲೆಕ್ಕಿಸದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾಗಿದ್ದರು. ಇದರ ನಡುವೆ ಖಾಸಗಿ ಬಸ್ ಗಳು ಸಾಲಾಗಿ ನಿಂತು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದದ್ದು ಕಂಡು ಬಂತು. ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೂ ಬಸ್ತ್ ಮಾಡಲಾಗಿತ್ತು.

