ಗುಂಡ್ಲುಪೇಟೆ : ಆಹಾರವನ್ನರಸಿ ಕಾಡಿನಿಂದ ನಾಡಿಗೆ ಬಂದು ಮನೆಯೊಳಗೆ ನುಗ್ಗಿದ್ದ ಕಡವೆಯನ್ನ ರಕ್ಷಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಕಾಡಿಗೆ ಸ್ಥಳಾಂತರಿಸಿದ ಘಟನೆ ಮಂಗಳವಾರ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯಕ್ಕೆ ಸೇರಿದ ಬೊಮ್ಮಲಾಪುರ ಗ್ರಾಮದಲ್ಲಿ ಕಾಣಿಸಿಕೊಂಡ ಕಡವೆ ರಾಜೇಶ್ ಎಂಬವರ ಮನೆಗೆ ನುಗ್ಗಿ ಆತಂಕ ಸೃಷ್ಟಿಸಿತ್ತು ಕೂಡಲೇ ರೂಮಿನೊಳಗೆ ಕೂಡಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಡವೆಯನ್ನ ರಕ್ಷಿಸಿ ಸುರಕ್ಷಿತವಾಗಿ ಕುಂದಕೆರೆ ಅರಣ್ಯ ವಲಯಕ್ಕೆ ಸ್ಥಳಾಂತರಿಸಿದ್ದಾರೆ. ಮನೆಯೊಳಗೆ ಒಕ್ಕರೂ ಸಹ ವಸ್ತುಗಳಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಮಾಲೀಕ ರಾಜೇಶ್ ತಿಳಿಸಿದ್ದಾರೆ.

