ಚಾಮರಾಜನಗರ : ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಮಾಡಿರುವುದನ್ನು ಖಂಡಿಸಿ ಹಾಗೂ ಮರು ಸೇರ್ಪಡೆಮಾಡುವಂತೆ ಆಗ್ರಹಿಸಿ ಮಂಗಳವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇಗುಲದ ಎದುರು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ನೇತೃತ್ವದಲ್ಲಿ ಬಾರಿ ಸಂಖ್ಯೆಯಲ್ಲಿ ಜಮಾಯಿಸಿದ ನಾಯಕ ಸಮುದಾಯದ ಮುಖಂಡರು ರಾಜ್ಯ ಸರ್ಕಾರ,ಸಿಎಂ, ಡಿಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಬಳಿಕ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹಾದು ಹೋಗಿರುವ ಶ್ರೀ ಭುವನೇಶ್ವರಿ ವೃತ್ತಕ್ಕೆ ತಲುಪಿ ಬಳಿಕ ಬೀರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗುವ ಮೂಲಕ ಜಿಲ್ಲಾಡಳಿತ ಭವನ ತಲುಪಿ ಕೆಲಕಾಲ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

