ಚಾಮರಾಜನಗರ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತ್ಯೆಯಾಗಿರುವ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಇಂದು ಕೊಳ್ಳೇಗಾಲದಲ್ಲಿ ಜಾಗತಿಕ ವೀರಶೈವ ಮಹಾಸಭಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡೆಸಿದ ಪ್ರತಿಭಟನಾಕಾರರು ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಚಿತ್ರನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಸಲ್ಲಿಸಿದರು.

