ಚಾಮರಾಜನಗರ : ಮನೆಮುಂಭಾಗ ಆಟವಾಡ್ತಿದ್ದ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿ ಹಿಂಡು ತೀವ್ರವಾಗಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿ ಸಂಭವಿಸಿದೆ.
ತಿಮ್ಮರಾಜಿಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿಯ ಪುತ್ರ ದಿಶಾಂತ್ ( 06) ನಾಯಿಗಳ ದಾಳಿಗೆ ತುತ್ತಾದ ಬಾಲಕನಾಗಿದ್ದು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಮ್ಮ ಏರಿಯಾದಲ್ಲಿ ನಾಯಿಗಳ ಹಾವಳಿ ಮಿತಿಮೀರಿದ್ದು ರಾತ್ರಿ ವೇಳೆ ತಿರುಗಾಡಲು ಸಹ ಹಿಂಜರಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಆದುದರಿಂದ ಗ್ರಾಮಪಂಚಾಯತಿ ಅವರು ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

