ಚಾಮರಾಜನಗರ : ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಬಳಿಯ ಗುಮ್ಮಾಟಾಪುರಂ ಗ್ರಾಮದಲ್ಲಿ ಕಬ್ಬು ತುಂಬಿದ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಿಂದ ಸತ್ಯಮಂಗಲಂ ಖಾಸಗಿ ಸಕ್ಕರೆ ಕಾರ್ಖಾನೆಗೆ ಕಬ್ಬು ಹೊತ್ತೊಯ್ಯುತ್ತಿದ್ದ ಲಾರಿ ತಾಳವಾಡಿ ಬಳಿಯ ಗುಮ್ಮಟಾಪುರಂ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

