ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಕಾಡು ನಾಡು ಎರಡು ಕಡೆಯೂ ಹುಲಿಯದ್ದೆ ದರ್ಬಾರ್ ನಡೆಯುತ್ತಿದ್ದು, ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿ ದರ್ಶನವಾಗಿದೆ.

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕೆ ಗುಡಿ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿ ದರ್ಶನ ಕೊಟ್ಟಿದೆ.ಹುಲಿ ಕಂಡು  ಪ್ರವಾಸಿಗರು ಪುಳಕಿತರಾಗಿದ್ದಾರೆ. ಕಳೆದ 10 ದಿನದಿಂದಲೂ ಕೂಡ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಹುಲಿ ದರ್ಶನ ಕೊಡ್ತಿದೆ.