ಚಾಮರಾಜನಗರ : ಐದು ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಹಿರಿಯ ಶ್ರೇಣಿ ನ್ಯಾಯಧೀಶೆ ಕಾವ್ಯಶ್ರೀ ರವರ ನಿವಾಸದಲ್ಲಿ ಹಾಜರು ಪಡಿಸಲಾಗಿದ್ದು, ಜೂನ್ 30 ರ ತನಕ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಇದಕ್ಕೂ ಮುನ್ನ ಆರೋಪಿಗಳಾದ ಮಾದರಾಜು, ನಾಗರಾಜು ಹಾಗೂ ಕೋನಪ್ಪ ರವರನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

