ಗುಂಡ್ಲುಪೇಟೆ : ಕಳೆದ ಎಂಟು ದಿನಗಳಿಂದಲೂ ಸಹ ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಎಪಿಎಂಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಸೂರ್ಯಕಾಂತಿ ಬೆಳೆಗಾರರ ಮನವಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ, ರಾಜ್ಯ ಸರ್ಕಾರವು ರೈತರ ಪರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು ರೈತ ವಿರೋಧಿತನ ತೋರಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ಹೊರಹಾಕಿದರು.

ಎಪಿಎಂಸಿ ಕಚೇರಿ ಮುಂಭಾಗ ಮಾದ್ಯಮದವರೊಟ್ಟಿಗೆ ಮಾತನಾಡುತ್ತ ಕೈಗಾರಿಕೆ ಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಸೂರ್ಯಕಾಂತಿ ಬೆಳೆಯನ್ನ ಗುಂಡ್ಲುಪೇಟೆ ಭಾಗದಲ್ಲಿ ಅತಿ ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ತಾವು ಖರೀದಿ ಕ್ರಮ ಜರುಗಿಸಲು ಒತ್ತಾಯಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು, ಬಳಿಕ ಕುಮಾರಸ್ವಾಮಿಯವರೆ ಖುದ್ದಾಗಿ ಪತ್ರ ಬರೆದಿದ್ದರೂ ಸಹ ಇದುವರೆವಿಗೂ ಯಾವುದೇ ರೀತಿಯಾದ ತುರ್ತು ಕ್ರಮ ಕೈಗೊಂಡಿಲ್ಲ ಎಂದು ನಾಗಾರ್ಜುನ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಕೃಷಿ ಸಚಿವರು ಎನ್. ಚೆಲುವರಾಯ ಸ್ವಾಮಿ ಹಾಗೂ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಶಿವಾನಂದ್ ಕಪಾಶಿ ಅವರು ಸಹ ಬೆಂಬಲ ಬೆಲೆ ಯೋಜನೆಯ ಅನುಷ್ಠಾನಕ್ಕೆ ಮನವಿ ಮಾಡಿದ್ದರು ಸಹ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂದು ದೂರಿದರು.