Showing 20 of 44 posts • Page 1 of 3
ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮಕ್ಕಳಾಗಲಿಲ್ಲ ಅಂತ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿಯ ದೇವಾಲಯದಲ್ಲಿ ಶ್ರೀರಾಮನವಮಿ ಹಬ್ಬದಂದು ಪ್ರಸಾದ ಸೇವಿಸಿದ ನೂರಾರು ಮಂದಿ ಗ್ರಾಮಸ್ಥರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಫುಡ್ ಪಾಯಿಸನ್ ಸಮಸ್ಯೆಯಿಂದ ಗ್ರಾಮಸ್ಥರು ಬಳಲುತ್ತಿದ್ದಾರೆ.
ಟೊಮೆಟೊ ಬೆಲೆ ತೀವ್ರವಾಗಿ ಕುಸಿದಿದ್ದು, ಪಟ್ಟ ಶ್ರಮಕ್ಕೆ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ.
ಗ್ರಾಮಾಂತರ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪವಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.
ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.
ಖಜಾನೆ ಖಾಲಿ ಎನ್ನುವ ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ಕೀರ್ತಿ ನಗರ ಬಡಾವಣೆ ಮನೆಯೊಂದರಲ್ಲಿ ಸಕ್ರಿಯವಾಗಿದ್ದ ಅಕ್ರಮ ಗಾಂಜಾ ಮಾರಾಟ ಜಾಲವನ್ನು ಪೊಲೀಸರು ಶುಕ್ರವಾರ ರಾತ್ರಿ ಭೇದಿಸಿದ್ದಾರೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಧರ್ಮಸ್ಥಳ ಶ್ರೇಷ್ಠ ಹಾಗೂ ಪವಿತ್ರವಾದ ಕ್ಷೇತ್ರ, ಹೀಗಾಗಿ ಧರ್ಮಸ್ಥಳದ ಜೊತೆ ನಾವು ಇದ್ದೇವೆ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.
ಪೊಲೀಸ್ ಠಾಣೆ ಯಲ್ಲಿ ಪ್ರೇಮಿಗಳಿಗೆ ಮದುವೆ ಮಾಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ನಡೆದಿದೆ. ಯುವತಿಗೆ ಕಾಲುಂಗರ ತೊಡಿಸಿ ಸಬ್ ಇನ್ಸ್ಪೆಕ್ಟರ್ ಮದುವೆ ಮಾಡಿಸಿದ್ದಾರೆ.
ಕೃಷಿ ಹೊಂಡದ ಬಳಿ ಮೋಟಾರ್ ಪಂಪ್ಸೆಟ್ ರಿಪೇರಿ ಮಾಡಲು ತೆರಳಿದ್ದ ಮೂವರು ಕರೆಂಟ್ ಶಾಕ್ಗೆ ಸಿಲುಕಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ.
ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ.
ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ನಂದಿ ಬೆಟ್ಟಕ್ಕೆ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿದೆ.
ಟಾಟಾ ಸುಮೋ, ಲಾರಿ ನಡುವೆ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿದ ಘಟನೆ ಇಂದು ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹೆಂಡತಿ ಕಪ್ಪಾಗಿದ್ದಾಳೆಂದು ಮದುವೆಯಾದಾಗಿನಿಂದಲೂ ಗಂಡ ಅವಮಾನ ಮಾಡುತ್ತಿದ್ದ ಕಾರಣದಿಂದ ಚಿಕ್ಕಬಳ್ಳಾಪುರದ ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಟೊಮ್ಯಾಟೊ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.