ಚಿಕ್ಕಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಲಾವಣ್ಯ (30) ಆತ್ಮಹತ್ಯೆಗೆ ಶರಣಾದವರು. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ಲಾವಣ್ಯಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲಾವಣ್ಯ ಮಂಜುನಾಥ್ ಎಂಬುವರ ಜತೆ ವಿವಾಹವಾಗಿದ್ದರು. 13 ವರ್ಷಗಳ ದಾಂಪತ್ಯಕ್ಕೆ ಇಬ್ಬರು ಮಕ್ಕಳನ್ನು ಹೊಂದಿದ್ದರು. ಆದರೆ ಇದೀಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

