ಚಿಕ್ಕಬಳ್ಳಾಪುರ: ಟೊಮೆಟೊ ಬೆಲೆ ತೀವ್ರವಾಗಿ ಕುಸಿದಿದ್ದು, ಪಟ್ಟ ಶ್ರಮಕ್ಕೆ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ.
ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿರುವುದುರಿಂದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂ. ಮಾರಾಟವಾಗುತ್ತಿರುವುದು ರೈತರಿಗೆ ದಿಕ್ಕು ತೋಚದಂತಾಗಿದೆ.
ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

