Showing 20 of 77 posts • Page 1 of 4
ಪೊಲೀಸ್ ಮನೆಗೆ ಕನ್ನ ಹಾಕಿದ ಕಳ್ಳರು ಸುಮಾರು ಎಂಟು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ರಾಮನಹಳ್ಳಿಯ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ.
ಯುವಕರ ಗುಂಪೊಂದು ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಪುಂಡಾಟ ಮೆರೆದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ.
ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಕಾಡುಕೋಣದ ದಾಳಿಗೆ ಯುವಕ ಬಲಿಯಾದ ಘಟನೆ ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ನಲ್ಲಿ ನಡೆದಿದೆ.
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ.
ಎಸ್ಟೇಟ್ ವೊಂದರಲ್ಲಿ ಮರ ಕಟಾವು ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆರಡಿ ಗ್ರಾಮದಲ್ಲಿ ನಡೆದಿದೆ.
ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಮರ್ಚೆಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ನಿಶ್ಚಿತ್ ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದಾರೆ.
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಯಿತು.
ಕಾರ್ಮಿಕ ಮಹಿಳೆಯನ್ನು ಸಾಯಿಸಿದ ಕಾಡಾನೆಯನ್ನು ಕೆಲವೇ ಗಂಟೆಯಲ್ಲಿ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ನಡೆದಿದೆ.
ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳಿ ಸಮೀಪ ನಡೆದಿದೆ.
ಹಣದಾಸೆಗೆ ತಂದೆಯೇ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ ಕ್ರೂರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.
ಇನ್ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಕಾರೊಂದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಿಗರನ್ನು ಕರೆತರುತ್ತಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರಿನ ಕಳಸದ ಬಳಿ ನಡೆದಿದೆ.
ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ.
ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ನಗರದ ಪಿಯುಸಿ ಕಾಲೇಜೊಂದರ 25 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಅದರಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.