ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಬೇಕು ಎಂದು ಯೋಜನೆ ಹಾಕಿಕೊಂಡವರಿಗೆ ಬ್ಯಾಡ್ ನ್ಯೂಸ್. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವೇಶಕ್ಕೆ ಅವಕಾಶವಿಲ್ಲ. ಜುಲೈ 29ರವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುಂದುವರಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಹಲವು ಕಡೆಯಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ವೀಕೆಂಡ್ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತದೆ.

