ಚಿಕ್ಕಮಗಳೂರು: ವಿದ್ಯಾರ್ಥಿಗಳಿದ್ದ  ಖಾಸಗಿ ಬಸ್‌  ಪಲ್ಟಿಯಾಗಿ 11 ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಬಳಿ ಘಟನೆ ನಡೆದಿದೆ.

ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.  ಚಿತ್ರದುರ್ಗದ ವಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಖಾಸಗಿ ಬಸ್‌ನಲ್ಲಿ ಬಂದಿದ್ದಾಗ ದುರ್ಘಟನೆ ಸಂಭವಿಸಿದೆ. ಕಾವಾಡಿ ಬಳಿ ಬಸ್‌ ಪಲ್ಟಿಯಾಗಿದ್ದು, 11 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.