ಚಿಕ್ಕಮಗಳೂರು: ಕಾರೊಂದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ. ವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಅನಾಹುತ ತಪ್ಪಿದೆ. ಚಾಲಕನ ವೇಗದ ಚಾಲನೆ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

