Showing 17 of 77 posts • Page 4 of 4
ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಸೌಂದರ್ಯ ದುಪಟ್ಟಾಗಿರುತ್ತದೆ.
ಬಣಕಲ್, ಚಕ್ಕಮಕ್ಕಿ, ಹೊರಟ್ಟಿ, ಕೊಟ್ಟಿಗೆಹಾರ, ಗಬ್ ಗಲ್ ಮತ್ತಿತರ ಕಡೆ ಮುಸ್ಲಿಂ ಬಾಂದವರು, ಮಕ್ಕಳು ಹೊಸ ಬಟ್ಟೆ ತೊಟ್ಟು ಮಸೀದಿಗೆ ಹೋಗಿ ಕುರಾನ್ ಪಠಿಸಿ ನಮಾಜ್ ಮಾಡಿದರು. ಪರಸ್ಪರ ಹಬ್ಬದ ಶುಭಾಶಯ ಕೋರಿದರು.
ವಿದ್ಯುತ್ ಶಾಕ್ನಿಂದ 7 ನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು.
ನೇರಳೆ ಹಣ್ಣಿನ ಮರ ಹತ್ತಿದ ಬಾಲಕ ದುರಂತ ಅಂತ್ಯ ಕಂಡಿರುವ ಘಟನೆ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ನಡೆದಿದೆ.
ಚಾರ್ಮಡಿ ಘಾಟ್ ನಲ್ಲಿ ಕಡಾನೆಗಳ ಹಾವಳಿ ಹೆಚ್ಚಾಗಿದೆ. ಸರ್ಕಾರಿ ಬಸ್ ಗೆ ಅಡ್ಡಲಾಗಿ ಬಂದು ನಿಂತ ಒಂಟಿ ಸಲಗವೊಂದು ಬಸ್ ಗೆ ದಾರಿ ಬಿಡದೇ ಸತಾಯಿಸಿರುವ ಘಟನೆ ನಡೆದಿದೆ.
ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿದಾಟಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು
ವಿಜಯಪುರ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ೩೪ ನೇ ವಾರ್ಷಿಕೋತ್ಸವ ಸಮಾರಂಭವು ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಪೂಜಾ ವಿಧಿವಿಧಾನ ಗಳು ಅತ್ಯಂತ ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡು ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.
ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆ ಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್ಕುಮಾರ್ ಸನ್ನದ್ದರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಮನವಿ ಮಾಡಿದರು.
ನಗರದ ಪ್ರತಿಷ್ಠಿತ ೨ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಇಂದು ಭೇಟಿನೀಡಿ ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವಕುರಿತು ಪರಿಶೀಲನೆ ನಡೆಸಲಾಗಿದೆಎಂದುಜಿಲ್ಲಾ ಸಲಹಾ ಸಮಿತಿಅಧ್ಯಕ್ಷಡಾ. ಸಂತೋಷ್ ನೇತಾ ಹೇಳಿದರು.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಿಂದ ಬರುತ್ತಿರುವ ವರದಿಗಳು, ಸಾರ್ವಜನಿಕರ ಅಭಿಪ್ರಾಯದ ಪ್ರಕಾರ ಜಯಪ್ರಕಾಶ ಹೆಗಡೆ ಅವರು ಗೆಲ್ಲುವುದು ನಿಶ್ಚಿತ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಡಾ. ಕೆ.ಪಿ ಅಂಶುಮಂತ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.