ಚಿತ್ರದುರ್ಗ : ಕಾರು ಪಲ್ಟಿ ಹೊಡೆದ ಕಾರಣ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.

ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳಾಗಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಮೂಲ ಕಾರಣ ಎನ್ನಲಾಗಿದೆ.

ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.