ಚಿತ್ರದುರ್ಗ: ಕಾಂಗ್ರೆಸ್ಸಿಗೆ ರಾಮನ ಹೆಸರೆಂದರೆ ಅಲರ್ಜಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದರು.
ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶನಿವಾರ ಆಯೋಜಿಸಿದ್ದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಮನಗರ ಜಿಲ್ಲೆ ಮರುನಾಮಕಾರಣ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕಾಂಗ್ರೆಸ್‌ನವರಿಗೆ ರಾಮನ ಹೆಸರು ಕೇಳಿದರೆ ಅಲರ್ಜಿ ಆಗಲಿದೆ ಎಂದ ಅವರು, ರಾಮನ ವಿಷಯ ಬಂದಾಗ ಈ ರೀತಿಯ ಕೆಲಸಗಳಿಗೆ ಕೈ ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಹಗರಣಗಳನ್ನು ಮುಚ್ಚಿಹಾಕಿಕೊಳ್ಳಲು ಬೆದರಿಕೆ ತಂತ್ರ ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿನ ಸಚಿವರ ಒಂದೊಂದೇ ಹಗರಣಗಳು ಬಯಲಿಗೆ ಬರುತ್ತಲೇ, ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಬೆದರಿಕೆ ತಂತ್ರ ಹೆಣೆಯುತ್ತಿದ್ದಾರೆ ಎಂದರು.

