ಚಿತ್ರ ಕಲಾ ಮಾಂತ್ರಿಕ ಆಶೀಶ್ ಎಂ ರಾವ್ ವಾಮಂಜೂರ್ ಇವರು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026 ಗೆ ಆಯ್ಕೆಯಾಗಿದ್ದಾರೆ.
ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

