Bengaluru 28°C
Ad

ಸಡಗರ ಸಂಭ್ರಮದಿಂದ ಬಕ್ರೀದ್ ಆಚರಿಸಿದ ಮುಸ್ಲಿಂ ಬಾಂಧವರು

ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡಿದ್ದಾರೆ.

ನಂಜನಗೂಡು: ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡಿದ್ದಾರೆ.

ನಂಜನಗೂಡು ನಗರ, ಹುಲ್ಲಹಳ್ಳಿ , ದೊಡ್ಡ ಕವಲಂದೆ, ಹೆಡಿಯಾಲ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸಿದ್ದಾರೆ. ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಬಕ್ರೀದ್ ಹಬ್ಬದ ಅಂಗವಾಗಿ ನಂಜನಗೂಡಿನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

ಈದ್ಗಾ ಮೈದಾನದಲ್ಲಿ ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಚಿಕ್ಕ ಮಕ್ಕಳು, ಹಿರಿಯರು ಸೇರಿದಂತೆ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಕ್ರೀದ್ ಹಿನ್ನೆಲೆಯಲ್ಲಿ, ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿರುವುದು ಕಂಡು ಬಂದಿತು.

Ad
Ad
Nk Channel Final 21 09 2023
Ad