Bengaluru 24°C
Ad

ಮೆಕ್ಕಾದಲ್ಲಿ ತಾಪಮಾನ ಏರಿಕೆ: 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಮೃತ್ಯು

ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದಾಗಿ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು.

ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದಾಗಿ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು.

Ad
300x250 2

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್‌ ಯಾತ್ರೆಯಲ್ಲಿ ಭಾಗವಹಿಸಿದ್ದರು, ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ರಾಜತಾಂತ್ರಿಕರು ತಿಳಿಸಿದ್ದಾರೆ.

ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಒಮ್ಮೆಯಾದರೂ ಹಜ್‌ ಯಾತ್ರೆಯನ್ನು ಪೂರ್ಣಗೊಳಿಸಬೇಕು ಎಂದು ಭಾವಿಸುತ್ತಾರೆ.  ಈ ಬಾರಿ ಮೆಕ್ಕಾದಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ನೂರಾರು ಜನ ಮೃತಪಟ್ಟಿದ್ದಾರೆ, ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್  ಕಂಡುಬಂದಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

 

 

 

Ad
Ad
Nk Channel Final 21 09 2023
Ad