ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಗೊತ್ತುಪಡಿಸದ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.
ಈ ದಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅವರು ಆಡಳಿತ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

