Bengaluru 22°C
Ad

ಬಕ್ರೀದ್ ಹಿನ್ನಲೆ ಮುಸ್ಲಿಂಮರಿಗೆ ಎಚ್ಚರಿಕೆ ಕೊಟ್ಟ ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ  ಸಂದೇಶವೊಂದನ್ನು ನೀಡಿದ್ದಾರೆ.

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ  ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಗೊತ್ತುಪಡಿಸದ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

Ad
300x250 2

ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.‌ ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.

ಈ ದಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅವರು ಆಡಳಿತ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

 

 

Ad
Ad
Nk Channel Final 21 09 2023
Ad