ಹೈದರಾಬಾದ್: ಹೈದರಾಬಾದ್‌ನಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಅಪರಾಧ ಮಾಡುವ ಮೊದಲು ಆಕೆಗೆ ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿದ್ದರು. ಈ ಅತ್ಯಾಚಾರದ ಘಟನೆಯ ನಂತರ ಆಕೆ ಗರ್ಭಿಣಿಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
4ನೇ ತರಗತಿ ಬಾಲಕಿಯ ಜೊತೆ ಜೂನ್ 25ರಂದು ನಗರದ ಕಾಚಿಗುಡಾ ಪ್ರದೇಶದಿಂದ ನರೇಶ್ ಮತ್ತು ವಿಜಯ್ ಕುಮಾರ್ ಎಂಬುವರು ಸಾಮಾನ್ಯ ಸ್ನೇಹಿತನ ಮೂಲಕ ಸ್ನೇಹ ಬೆಳೆಸಿದ್ದರು. ಅವರು ತಮ್ಮ ಇತರೆ ಗೆಳೆಯರ ಜೊತೆ ಸೇರಿ ಆ ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಅಲ್ಲದೆ, ಮಾದಕವಸ್ತು ತುಂಬಿದ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿ, ಕುಡಿಸಿದ್ದರು. ನಿರಂತರವಾಗಿ ಅತ್ಯಾಚಾರ ನಡೆಸಿದ್ದರಿಂದ ಆ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಇನ್ನು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

