Ad

ಸಾಮೂಹಿಕ ಅತ್ಯಾಚಾರಕ್ಕೆ 13 ವರ್ಷದ ಬಾಲಕಿ ಬಲಿ : ಹೆದ್ದಾರಿಯಲ್ಲಿ ಶವ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹರಿದ್ವಾರದ ಹೆದ್ದಾರಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಹರಿದ್ವಾರ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹರಿದ್ವಾರದ ಹೆದ್ದಾರಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ಥಳೀಯ ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಹಚರರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

Ad
300x250 2

ಮಂಗಳವಾರ ಬೆಳಗ್ಗೆ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಆದಿತ್ಯರಾಜ್ ಸೈನಿ ಸ್ಥಳೀಯ ಬಿಜೆಪಿ ಒಬಿಸಿ ಮೋರ್ಚಾ ಸದಸ್ಯನಾಗಿದ್ದ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆದಿತ್ಯ ಕೊಠಾರಿ ನೀಡಿರುವ ಪತ್ರದ ಪ್ರಕಾರ ಮಂಗಳವಾರವೇ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

Ad
Ad
Nk Channel Final 21 09 2023
Ad