ಇಂದೋರ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 69 ವರ್ಷದ ಮುದುಕನೊಬ್ಬ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಗಸ್ಟ್ 14 ರಂದು ಬಿಯೋಹರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಪೊಲೀಸರಿಗೆ ದೂರು ನೀಡಲಾಗಿದೆ.
16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ಆರೋಪಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಿಯೋಹರಿ ಪೊಲೀಸ್ ಠಾಣೆಯ ಉಸ್ತುವಾರಿ ಅರುಣ್ ಪಾಂಡೆ ತಿಳಿಸಿದ್ದಾರೆ. ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರು ಆಗಸ್ಟ್ 15 ರಂದು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.