Ad

ಲವ್‌ ಕಹಾನಿ; ಬೆಂಗಳೂರಲ್ಲಿ ನಡೆಯಿತು ಮತ್ತೊಂದು ಬರ್ಬರ ಹತ್ಯೆ

Death

ಬೆಂಗಳೂರು: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ನಡೆದಿದೆ. 17 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಿ ಹೋಗಿರುವ ಘಟನೆ ನಗರದ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad
300x250 2

ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ. ಮೊನ್ನೆ ರಾತ್ರಿ ಮಂಜುನಾಥ್ ತಲೆಗೆ ರಾಡ್​ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಳಿಕ ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವವನ್ನು ಎಸೆದು ಬಂದಿದ್ದಾರೆ ಎನ್ನಲಾಗಿದೆ.

ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad