ಮುಂಬೈ: ಯುವತಿಯನ್ನು ಹತ್ಯೆ ಮಾಡಿ ಪೊದೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಯುವತಿಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಕೆಯನ್ನು ಕೊಂದಿರುವ ಹಂತಕ ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿ ಮೃತದೇಹವನ್ನು ಎಸೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ (20) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರಿಗೆ ಕರೆ ಬಂದಿತ್ತು.

ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಅಧಿಕಾರಿಗಳು ಯುವತಿ ದೇಹದ ಮೇಲೆ ಅನೇಕ ಗಾಯದ ಗುರುತುಗಳನ್ನು ಪತ್ತೆ ಮಾಡಿದ್ದಾರೆ. ಯುವತಿಯನ್ನು ಅತ್ಯಂತ ಕ್ರೂರವಾಗಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಮುಂಬೈ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಆರೋಪಿಗಳ ಪತ್ತೆಗಾಗಿ ಐದು ಪೊಲೀಸ್ ತಂಡಗಳು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.