ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳು ನಂತರ ಕೊಲೆ ಮಾಡಿ ಪಾರ್ಕಿಂಗ್ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ.

