ಮೈಸೂರು: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ನಂಜನಗೂಡಿನ ಮೇದಾರ ಬೀದಿ ನಿವಾಸಿ ಪಾರ್ವತಮ್ಮ (75) ಮೃತ ದುರ್ದೈವಿ. ಇವರು ಚಾಮರಾಜನಗರ ಬೈಪಾಸ್ ರಸ್ತೆಯನ್ನು ದಾಟುತ್ತಿದ್ದರು. ಇದೇ ವೇಳೆ ಅದೇ ರಸ್ತೆಯಲ್ಲಿ ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ವೃದ್ಧೆಯ ಮೇಲೆ ಹರಿದಿದೆ.
ಘಟನೆಯ ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರ ಭೇಟಿ ನೀಡಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

