ಹಾವೇರಿ: ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್​ನಲ್ಲಿ ನಡೆದಿದೆ.

ಆಬಿದ್ ಅಲ್ಲಾಭಕ್ಷ್ ಚೌದ್ರಿ (30) ಹಲ್ಲೆಗೊಳಗಾದ ವ್ಯಕ್ತಿ. ಈತ ಗ್ಯಾರೇಜ್​​ನಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಎರಡು ಬೈಕ್​​ಗಳಲ್ಲಿ ಬಂದ ದುಷ್ಕರ್ಮಿಗಳು ಏನನ್ನು ಮಾತನಾಡದೇ ಏಕಾಏಕಿ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮಚ್ಚಿನಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಸವಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ಸವಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.