Bengaluru 24°C
Ad

ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ

ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ.

ತುಮಕೂರು: ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ.

ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು.

ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ ಭಾರತೀಯ ಭೂಸೇನೆ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯ ಮೇಲೆ ಊರಿಗೆ ಬಂದಿದ್ದು, ಬೈರೇನಹಳ್ಳಿ ಕ್ರಾಸ್​ಗೆ ಬರುತ್ತಿದ್ದರು. ಈ ವೇಳೆ ದಾರಿ ಮಧ್ಯೆ ನಿಂತಿದ್ದವರಿಗೆ ಯೋಧ ಗೋವಿಂದರಾಜು ಅವರು ದಾರಿ ಬಿಡಿ ಎಂದಿದ್ದಾರೆ.

ಈ ವೇಳೆ ಕುಡಿದ ಮತ್ತಲ್ಲಿ ಐವರು ಮದ್ಯದ ಬಾಟಲಿಯಿಂದ ಯೋಧ ಗೋವಿಂದರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad