Bengaluru 25°C

ಬಾಲಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ; ಮುಸ್ಲಿಂ ಶಿಕ್ಷಣ ಸಂಸ್ಥೆ ಮುಖ್ಯಸ್ಥನ ವಿರುದ್ಧ ಆಕ್ರೋಶ

ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.


ಉಡುಪಿ ಜಿಲ್ಲೆಯ ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.ಇಲ್ಲಿನ ತ್ವೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು ಎಂಬವರು ಬಾಲಕನ ಮೈಮೇಲೆ ಬರೆ ಬರುವ ರೀತಿಯಲ್ಲಿ ಏಟು ನೀಡಿದ್ದಾರೆ.


ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಜನಾಕ್ರೋಶ ವ್ಯಕ್ತವಾದ ಬಳಿಕ ಹಲ್ಲೆ ನಡೆಸಿದ ಸಂಸ್ಥೆಯ ಮುಖ್ಯಸ್ಥನನ್ನು ವಜಾ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿ ಬಿಟ್ಟು ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದು ಜನರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪ ಹೊತ್ತಿರುವ ಸಅದಿ ಕಿಲ್ಲೂರು ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.


Nk Channel Final 21 09 2023