ಮಂಗಳೂರು: ಯುವಕನ‌ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೂಪಾಡಿಕಲ್ಲು ನಿವಾಸಿ ಅಕಿಲೇಶ್ ಮೇಲೆ ದಾಳಿ ನಡೆಸಲಾಗಿದೆ.

ಬೈಕ್ ನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದವರ ಮೊಬೈಲ್ ನಲ್ಲಿ ಅಕಿಲೇಶ್ ವಿಡಿಯೋ ಮಾಡಿದ್ದರು. ವಿಡಿಯೋ ಮಾಡಿದ್ದನ್ನು ಆಕ್ಷೇಪಿಸಿ ಅಕಿಲೇಶ್ ಮೇಲೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಬೈಕ್ ನಲ್ಲಿ ಮೂವರು ದುಷ್ಕರ್ಮಿಗಳು  ಬಂದಿದ್ದರು.

ಗಾಯಗೊಂಡ ಅಕಿಲೇಶ್ ಗಡ  ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ  ಬಜಪೆ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.