Bengaluru 16°C

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ : ಮೂವರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್‍ಎಸ್‍ವಿ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್‍ಎಸ್‍ವಿ ರಸ್ತೆಯಲ್ಲಿ ನಡೆದಿದೆ.


ಹಲ್ಲೆಗೊಳಗಾದ ಯುವಕನನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಟ್ರಾಫಿಕ್‍ನಲ್ಲಿ ವಾಹನ ಚಲಾಯಿಸುವಾಗ ಬೈಕ್ ತಾಗಿದೆ ಎಂದು ಕಿಡಿಗೇಡಿಗಳು ವಿಕ್ರಮ್ ಬಳಿ ಗಲಾಟೆ ಮಾಡಿದ್ದಾರೆ. ಬಳಿಕ ಬೈಕ್‍ನಲ್ಲಿ ತೆರಳುತ್ತಿದ್ದ ಆತನನ್ನು ಹಿಂಬಾಲಿಸಿ ರಸ್ತೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ನಡೆಸಿದ ಮದನ್, ನಿತಿನ್ ಹಾಗೂ ಪ್ರಕಾಶ್ ಎಂಬವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.


Nk Channel Final 21 09 2023