ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಭಾರ್ಗವ್ (24) ಕೊಲೆಯಾದ ಯುವಕ. ಈತ ಕೋಲಾರ ಮೂಲದವನಾಗಿದ್ದು, ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ.  ಈ ವೇಳೆ ಹಂತಕರು ಕಾರು ಚೇಸ್ ಮಾಡಿ ಬ್ರೇಕ್ ಹಾಕಿದ್ದಾರೆ.

ಪರಿಣಾಮ ಕಾರಿನ ಮುಂಭಾಗ ಹಂತಕರ ಕಾರಿಗೆ ಡಿಕ್ಕಿಯಾಗಿದೆ. ಇದೇ ನೆಪದಲ್ಲಿ ಗಲಾಟೆ ಮಾಡಿ ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ನಂತರ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.