ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಆರಂಭದಲ್ಲಿ ತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು. ಬಳಿಕ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವರದಿಗಳ ಪ್ರಕಾರ ಆರೋಪಿ ಸಿಟಿ ಸಿವಿಲ್ ಕೋರ್ಟ್‌ನ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

