ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Ad