Bengaluru 22°C
Ad

ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಹೈಕೋರ್ಟ್‌ನಲ್ಲಿ ನಿರ್ಧಾರ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ.

ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Ad
Ad
Nk Channel Final 21 09 2023