Bengaluru 28°C
Ad

3 ವರ್ಷದ ಬಾಲಕಿ ಮೇಲೆ ಬಿಜೆಪಿ ನಾಯಕನ ತಂದೆಯಿಂದ ಅತ್ಯಾಚಾರ !

Rapecase

ಕೊಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ್ ಹರಿಪುರ ಪ್ರದೇಶದಲ್ಲಿ ಬಿಜೆಪಿಯ ಪಂಚಾಯತ್ ಅಭ್ಯರ್ಥಿಯ ತಂದೆ ಮನೋರಂಜನ್ ಹಲ್ದರ್ ಎಂಬಾತ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಜಿಲ್ಲೆಯ ಬಿಜೆಪಿ ಬೂತ್ ಅಧ್ಯಕ್ಷರಾಗಿದ್ದಾರೆ. ಈ ಘಟನೆಯ ನಂತರ 3 ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಂತ್ರಸ್ತೆಯ ತಂದೆಯೊಂದಿಗೆ ಮಾತನಾಡಿದ್ದಾರೆ. ಅವರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಆಗ ಅವರ ಪತ್ನಿ ಮಧ್ಯಾಹ್ನ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಮಾಹಿತಿ ನೀಡಿದರು, ನಂತರ ಅವರು ಮನೆಗೆ ಧಾವಿಸಿದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಮಗುವನ್ನು ಕೂಡ ವೈದ್ಯಕೀಯ ಚಿಕಿತ್ಸೆಗಾಗಿ ಶಾಂತಿಪುರ ಆಸ್ಪತ್ರೆಗೆ ಕಳುಹಿಸಲಾಗಿದೆ. ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Ad
Ad
Nk Channel Final 21 09 2023